ಇಂದು ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಫಿಕ್ಸ್ ಸಾಧ್ಯತೆ…

ಬೆಂಗಳೂರು,ನವೆಂಬರ್,30,2020(www.justkannada.in): ಇಂದು ಬೆಳಗ್ಗೆ 11.30 ಕ್ಕೆ ರಾಜ್ಯ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಸಲಿದ್ದು, ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಇಂದೇ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ. logo-justkannada-mysore

ಹೈಕೋರ್ಟ್ ಚುನಾವಣೆ ನಡೆಸುವ ಬಗ್ಗೆ ನಿರ್ದೇಶನ ನೀಡಿದ್ದು, ಕೊರೋನಾ ಮಾರ್ಗಸೂಚಿಗಳೊಂದಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಆಯೋಗದಿಂದ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇಂದು 11.30ಕ್ಕೆ ರಾಜ್ಯ ಚುನಾವಣಾ ಆಯೋಗ ಸುದ್ಧಿಗೋಷ್ಠಿ ನಡೆಸಲಿದ್ದು, ಈ ವೇಳೆ ಗ್ರಾಪಂ ಗೆ ಮೂಹೂರ್ತ ಫಿಕ್ಸ್  ಆಗಲಿದೆ ಎನ್ನಲಾಗಿದೆ. ಇನ್ನು 3 -4 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಆರಂಭದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಆಸಕ್ತಿ ತೋರದ ರಾಜಕೀಯ ಪಕ್ಷಗಳು ನಂತರದಲ್ಲಿ ಪಂಚಾಯತಿ ಚುನಾವಣೆಗೆ ಅಗತ್ಯ ತಯಾರಿ ಕೈಗೊಂಡಿವೆ.

Key words: Possibility – fix date – gram panchayat -elections