ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ಕೊಟ್ರೆ ನಿಭಾಯಿಸುವೆ- ಶಾಸಕ ಸತೀಶ್ ಜಾರಕಿಹೊಳಿ….

ಬೆಳಗಾವಿ,ಜ,17,2020(www.justkannada.in): ನಾಲ್ಕು ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ಸೃಷ್ಠಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಹೈಕಮಾಂಡ್  ಬಳಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು ಈ ಬೆನ್ನಲ್ಲೆ ಕಾರ್ಯಾಧ್ಯಕ್ಷ ಸ್ಥಾನಕ್ಕಾಗಿ ಶಾಸಕ ಸತೀಶ್ ಜಾರಕಿಹೊಳಿ ಲಾಬಿ ಆರಂಭಿಸಿದ್ದಾರೆ.

ಹೌದು, ನನಗೆ ಯಾವುದೇ ಹುದ್ದೆ ಕೊಟ್ಟರೂ ನಿಭಾಯಿಸುವೆ.  ನನಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ನೀಡಿದರೇ ನಿಭಾಯಿಸುತ್ತೇನೆ ಎಂದು ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ, ಕೆಪಿಸಿಸಿಗೆ ಅಧ್ಯಕ್ಷರು ಯಾರೇ ಆದ್ರೂ ಅವರು ನಮ್ಮವರೇ. ಡಿಕೆಶೀ ಅಧ್ಯಕ್ಷರಾದ್ರೆ ಅವರ ಜತೆ ಕೆಲಸ ಮಾಡುತ್ತೇವೆ. ಹೈಕಮಾಂಡ್ ತೀರ್ಮಾನ ಒಪ್ಪಲೇ ಬೇಕಾಗುತ್ತದೆ. ಯಾವುದೇ ಪಕ್ಷದಲ್ಲಿ ಗುಂಪುಗಾರಿಕೆ ಸಾಮಾನ್ಯ. ನನಗೆ ಕಾರ್ಯಾಧ್ಯಕ್ಷ ಹುದ್ದೆ ಕೊಟ್ರೆ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.

ಅಲ್ಲದೇ ಕಾರ್ಯಾಧ್ಯಕ್ಷ ಹುದ್ದೆಗೆ ಲಾಬಿ ನಡೆಸುತ್ತಿರುವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

Key words: post –KPCC-work- president-MLA Satish jarakiholli.