ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಿಕೆ….

ಬೆಂಗಳೂರು,ಡಿ,4,2019(www.justkannada.in):  ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆ ಬಿಬಿಎಂಪಿ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಿಕೆಯಾಗಿದೆ.

ಇಂದು ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಿಗದಿಪಡಿಸಲಾಗಿತ್ತು. ಹಾಗೆಯೇ ಇಂದು ಬೆಳಿಗ್ಗೆ 9.30ರವರೆಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಆದರೆ ಮೂರು ಪಕ್ಷದವರು ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಲಾಗಿದೆ.

ಮೂರು ಪಕ್ಷದವರು ಟೌನ್ ಹಾಲ್ ಮುಂದೆ ಕುಳಿತು ನಂತರ ತೆರಳಿದ್ದಾರೆ.

Key words: Postponement- election – 12 standing committees – BBMP.