“ಅಧಿಕಾರದ ದುರ್ಬಳಕೆ ಮತ್ತು ಅಕ್ರಮಗಳ ವಿರುದ್ಧ ಹೋರಾಟ” : ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,26,2021(www.justkannada.in) :  ಶರತ್ ಬಚ್ಚೇಗೌಡ ಅವರನ್ನು ಮೂಲೆಗುಂಪು ಮಾಡುವ ಬಿಜೆಪಿ ಸರ್ಕಾರದ ಹುನ್ನಾರವನ್ನು ಖಂಡಿಸುವ ಜೊತೆಗೆ, ಹೊಸಕೋಟೆಯಲ್ಲಿ ನಡೆಯುತ್ತಿರುವ ಅಧಿಕಾರದ ದುರ್ಬಳಕೆ ಮತ್ತು ಅಕ್ರಮಗಳ ವಿರುದ್ಧದ ಹೋರಾಟಕ್ಕೆ ಶರತ್ ಬಚ್ಚೇಗೌಡ ಅವರ ಜೊತೆ ನಾವು ಕೈಜೋಡಿಸಲಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

jkಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು, ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧದ ತಮ್ಮ ಹೋರಾಟಗಳಿಗೆ ಕಾಂಗ್ರೆಸ್‌ನ ಬೆಂಬಲ ಕೋರಿದ್ದಾರೆ. ಮುಂದಿನ ದಿನಗಳಲ್ಲಿ ಶರತ್ ಬಚ್ಚೇಗೌಡ ಅವರು ಮತ್ತು ನಾವು ಒಟ್ಟಾಗಿ ಬಿಜೆಪಿ ಸರ್ಕಾರದ ವಿರುದ್ಧ ಜನಜಾಗ್ರತಿ ಮೂಡಿಸುವ ಕೆಲಸ ಮಾಡಲಿದ್ದೇವೆ ಎಂದಿದ್ದಾರೆ.

ಶರತ್ ಬಚ್ಚೇಗೌಡ ರನ್ನು ಮೂಲೆಗುಂಪು ಮಾಡುವ ವ್ಯವಸ್ಥಿತ ಷಡ್ಯಂತ್ರ

Power-Abuse-irregularities-opposite-Fight -Opposition-leader-Siddaramaiah

ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ಅಲ್ಲಿನ ಶಾಸಕರೇ ವಹಿಸಿಕೊಳ್ಳಬೇಕು. ಆದರೆ, ಹೊಸಕೋಟೆಯಲ್ಲಿ ಇದಕ್ಕೆ ತದ್ವಿರುದ್ಧವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ಶರತ್ ಬಚ್ಚೇಗೌಡ ಅವರನ್ನು ಮೂಲೆಗುಂಪು ಮಾಡುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ದೂರಿದ್ದಾರೆ.

key words : Power-Abuse-irregularities-opposite-Fight -Opposition-leader-Siddaramaiah