ಬಿಬಿಎಂಪಿಯ ಅಧಿಕಾರ ಈ ಬಾರಿ ಬಿಜೆಪಿಗೆ- ಸಚಿವ ವಿ.ಸೋಮಣ್ಣ ವಿಶ್ವಾಸ…

ಬೆಂಗಳೂರು,ಸೆ,6,2019(www.justkannada.in):  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಈ ಬಾರಿ ಅಧಿಕಾರ‌ ಹಿಡಿಯಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ  ವಸತಿ ಸಚಿವ ವಿ.ಸೋಮಣ್ಣ ಬಿಬಿಎಂಪಿಯಲ್ಲಿ ಬಿಜೆಪಿ ಈ ಬಾರಿ ಅಧಿಕಾರ‌ ಹಿಡಿಯಲಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಪಾಲಿಕೆಯಲ್ಲಿ ನಮಗೆ ಅಧಿಕಾರ ಬಂದರೆ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಹಕಾರಿಯಾಗಲಿದೆ ಎಂಬುದು ಎಲ್ಲ ಸದಸ್ಯರ ಅಭಿಪ್ರಾಯ ವಾಗಿದೆ. ಹೀಗಾಗಿ ಬಿಜೆಪಿ ಈ ಬಾರಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಲಿದೆ ಎಂದರು.

ಮೈಸೂರು ದಸರಾ ಯಶಸ್ವಿಯಾಗಿ ನಡೆಸಲು ಎಲ್ಲ ಸಿದ್ದತೆ ಮಾಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡುತ್ತಿದ್ದು ಎಲ್ಲ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತಿದೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.

ಸಚಿವ ಸೋಮಣ್ಣರನ್ನ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್…

ಬೆಂಗಳೂರಿನಲ್ಲಿ ವಸತಿ ಸಚಿವ ಸೋಮಣ್ಣ ಅವರನ್ನ  ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿಯಾಗಿ ಚರ್ಚಿಸಿದರು. ಬಳಿಕ ಮಾತನಾಡಿದ ನಳೀನ್ ಕುಮಾರ್ ಕಟೀಲ್ ಸೋಮಣ್ಣ ಪಕ್ಷದ ಹಿರಿಯರು. ಅವರ ಜತೆ ಸಂಘಟನೆ ಕುರಿತು ಚರ್ಚಿಸಲಾಗಿದೆ. ಸ್ಥಳೀಯ ನಾಯಕರ ಜತೆಗೂ ಮಾತುಕತೆ ‌ನಡೆಸಲಾಗಿದೆ. ಇಂದು ಬಿಜೆಪಿ ಕೋರ್ ಕಮಿಟಿ ಸಭೆ ಇದ್ದು ಪಕ್ಷದ ಚಟುವಟಿಕೆ ‌ಕುರಿತು ಚರ್ಚಿಸಲಾಗುವುದು. ಸೋಮಣ್ಣ ಅವರ ಮಾರ್ಗ ದರ್ಶನ ಪಡೆದು ಸಲಹೆ ಸೂಚನೆಗಳನ್ನು ಕೇಳಿದ್ದೇನೆ ಎಂದರು.

Key words: power -BBMP -BJP -this time-Minister- V. Somanna -Confidence.