Sunday, August 23, 2026

BDA Apartments

Home Front Page ರಾಜ್ಯದಲ್ಲಿ ವಿದ್ಯುತ್ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿ ಕಾರಣ; ಸಿಎಂ ಸಿದ್ದರಾಮಯ್ಯ ಆರೋಪ

ರಾಜ್ಯದಲ್ಲಿ ವಿದ್ಯುತ್ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿ ಕಾರಣ; ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು,ಅಕ್ಟೋಬರ್,25,2023(www.justkannada.in):  ವಿದ್ಯುತ್ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ‍್ಧರಾಮಯ್ಯ, ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ. ವಿದ್ಯುತ್ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿ ಕಾರಣ. ಬಿಜೆಪಿ ಆಡಳಿತ ಅವಧಿಯಲ್ಲಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿಲ್ಲ. ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡಲು ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

ಬಿಜೆಪಿಯವರು ಸಾಲ ಮಾಡಿ ಅರ್ಥಿಕವಾಗಿ ರಾಜ್ಯ ದಿವಾಳಿ ಮಾಡಿ ಹೋಗಿದ್ದಾರೆ. ಹಣ ಇರದಿದ್ದರೂ ಕಾಮಗಾರಿ ಟೆಂಡರ್ ಕರೆದು 30 ಸಾವಿರ ಕೋಟಿ ರೂ. ಪೆಂಡೀಗ್ ಬಿಲ್ ಇದೆ. ಇದಕ್ಕೆ ಯಾರು ಹೊಣೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ನಮ್ಮ ಐದು ವರ್ಷದ ಆಡಳಿತ ಅರ್ಥಿಕ ಪರಿಸ್ಥಿತಿ, ಬಿಜೆಪಿ ಅವಧಿತ ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸುತ್ತೇನೆ. ಹೈಕಮಾಂಡ್ ಗೆ ದುಡ್ಡು ಕಳಿಸುತ್ತೇವೆ ಎಂಬುದು ಸುಳ್ಳು. ನಾವು ಯಾರಿಗೂ ಒಂದು ಪೈಸೆ ಕೊಟ್ಟಿಲ್ಲ ಎಂದು ತಿಳಿಸಿದರು.

Key words: power problem – state, – because – BJP- CM Siddaramaiah