Tuesday, September 29, 2026

BDA Apartments

Bengaluru BDA JK_Adv BDA Adv
Home Front Page ‘ಪ್ರಗತಿ 50’ ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆ ಹೆಮ್ಮೆಯ ವಿಷಯ-ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

‘ಪ್ರಗತಿ 50’ ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆ ಹೆಮ್ಮೆಯ ವಿಷಯ-ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್, 29,2026 (www.justkannada.in): ದೇಶದ ಆಯ್ದ 50 ನಗರಗಳನ್ನು ಮಾದರಿ ಸ್ವಚ್ಛ ನಗರಗಳಾಗಿ ರೂಪಿಸುವ ‘ಪ್ರಗತಿ 50’ (PRAGATI 50) ಉಪಕ್ರಮಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದ್ದು, ಈ ಮಹತ್ವದ ಯೋಜನೆಗೆ ಕರ್ನಾಟಕದ ಬೆಂಗಳೂರು ಮತ್ತು ಮೈಸೂರು ನಗರಗಳು ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ವಚ್ಛ ಭಾರತ ಮಿಷನ್–ನಗರ 2.0ರ ಹೊಸ ಕಾರ್ಯಕ್ರಮಗಳನ್ನು ಬಲಪಡಿಸುವ ಕುರಿತು ನಡೆದ ವೀಡಿಯೊ ಸಂವಾದ ಸಭೆಯಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭಾಗವಹಿಸಿದರು.Bengaluru yathindra siddaramaiah.jpg1 yathindra siddaramaiah 4.jpg1 4

ಈ ಸಂದರ್ಭದಲ್ಲಿ ‘ಪ್ರಗತಿ 50’ ಉಪಕ್ರಮಕ್ಕೆ ಚಾಲನೆ ನೀಡಿರುವುದನ್ನು ಸ್ವಾಗತಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ರಾಜ್ಯದ ಬೆಂಗಳೂರು ಮತ್ತು ಮೈಸೂರು ನಗರಗಳು ಯೋಜನೆಗೆ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ರಾಜ್ಯದ ನಗರಾಭಿವೃದ್ಧಿ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಪ್ರಮುಖ ಬೇಡಿಕೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಿದರು.

ಮಾದರಿ ನಗರಗಳ ಅಭಿವೃದ್ಧಿ ಸೇರಿದಂತೆ ವಿವಿಧ ಪ್ರಮುಖ ನಗರಾಭಿವೃದ್ಧಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಅನುದಾನದ ಪಾಲು ಅತ್ಯಂತ ಅಗತ್ಯವಾಗಿದ್ದು, ಬಾಕಿ ಇರುವ ಕೇಂದ್ರದ ಪಾಲಿನ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಭೆಯಲ್ಲಿ ಮನವಿ ಮಾಡಿದರು.

ರಾಜ್ಯದ ನಗರಾಭಿವೃದ್ಧಿ ಯೋಜನೆಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಸೇರಿದಂತೆ ಇತರ ಅಭಿವೃದ್ಧಿ ವಿಷಯಗಳ ಕುರಿತು ಪ್ರತ್ಯೇಕವಾಗಿ ಚರ್ಚಿಸಲು ಕೇಂದ್ರ ಸಚಿವರೊಂದಿಗೆ ಭೇಟಿಗೆ ಸಮಯ ಕೋರಲಾಗಿದ್ದು, ಶೀಘ್ರದಲ್ಲೇ ಭೇಟಿಗೆ ಸಮಯ ನಿಗದಿಪಡಿಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.Mysuru yathindra siddaramaiah yathindra siddaramaiah 5

ಉನ್ನತ ಮಟ್ಟದ ವೀಡಿಯೊ ಸಂವಾದ ಸಭೆಯಲ್ಲಿ ವಿವಿಧ ರಾಜ್ಯಗಳ ನಗರಾಭಿವೃದ್ಧಿ ಸಚಿವರು, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಾದ ಶ್ರೀ ಸತ್ಯೇಂದ್ರ ಸಿಂಗ್ ಹಾಗೂ ಸ್ವಚ್ಛ ಭಾರತ ಮಿಷನ್ ರಾಷ್ಟ್ರೀಯ ನಿರ್ದೇಶಕರಾದ ಡಾ. ಶಾಲಿನಿ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.'Pragati 50' scheme jk02_new jk02 new

 

English Summary
Title

Bengaluru and Mysuru Selected for PRAGATI-50 Model Cities Scheme

Short Description
Karnataka's Urban Development Minister, Dr. Yathindra Siddaramaiah, expressed immense pride over the selection of Bengaluru and Mysuru for the central government's 'PRAGATI-50' initiative. Launched under the Swachh Bharat Mission-Urban 2.0 framework, this ambitious scheme aims to transform 50 cities across India into role models for advanced urban sanitation. Beyond routine waste management, the chosen cities will implement comprehensive development infrastructure, including modern used water treatment, underground drainage upgrades, and extensive green cover expansion. Both Bengaluru and Mysuru will leverage this KPI-monitored framework to elevate their civic infrastructure and environmental cleanliness.
Keywords
Bengaluru, Mysuru, 'Pragati 50' scheme, Minister, Dr. Yathindra Siddaramaiah.