ಪ್ರಜ್ವಲ್ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿ- ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು,ಮೇ,18,2024 (www.justkannada.in):ಪ್ರಜ್ವಲ್  ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಯಾರನ್ನು  ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ.ಅದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಬಿವೈ ವಿಜಯೇಂದ್ರ, ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧವಾಗಿದೆ. ಪೆನ್ ಡ್ರೈವ್ ಹಂಚಿಕೆಯ ಹಿಂದಿರುವವರಿಗೂ ಶಿಕ್ಷೆ ಆಗಬೇಕು. ಇಲ್ಲಿ ಯಾರನ್ನು ರಕ್ಷಿಸುವ ಮಾಡುವ ಪ್ರಶ್ನೆಯೇ ಇಲ್ಲ. ಪ್ರಕರಣದಲ್ಲಿ ಘಟಾನುಘಟಿಗಳ ಹೆಸರು ಕೇಳಿ ಬರುತ್ತಿರುವುದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದರು.

ದೇವರಾಜೇಗೌಡರು  ದಿನಕ್ಕೊಂದು ಹೇಳಿಕೆ ಕೊಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆ ಇದ್ದರೆ ಸಿಬಿಐ ತನಿಖೆಗೆ ಕೊಡಬೇಕು.ಈ ಪ್ರಕರಣವನ್ನು ಚರ್ಚಾ ವಸ್ತುವನ್ನಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಬಿವೈ ವಿಜಯೇಂದ್ರ ಕಿಡಿಕಾರಿದರು.

Key words: Prajwal, case, CBI, probe, BY Vijayendra