Thursday, August 13, 2026

BDA Apartments

Home Front Page ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು, ಜೂನ್,26,2024 (www.justkannada.in): ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ  ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿಯಲ್ಲಿದ್ದಾರೆ.

Key words: Prajwal Revanna, bail, application, court