ಪ್ರಜ್ವಲ್ ರೇವಣ್ಣ ಪ್ರಕರಣ: ಮತ್ತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು, ಮೇ 23,2024 (www.justkannada.in):   ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಸಿಎಂ ಸಿದ್ದರಾಮಯ್ಯ  ಪತ್ರ ಬರೆದಿದ್ದರು. ಆದರೆ ಅದಕ್ಕೆ ಪ್ರತಿಕ್ರಿಯೆ ಬಾರದ ಹಿನ್ನೆಲೆ ಮತ್ತೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಿದರೆ ಪ್ರಜ್ವಲ್ ವಾಪಸ್ ಬರಲೇಬೇಕಾಗುತ್ತದೆ. ಹೀಗಾಗಿ ಆ ಕ್ರಮ ಕೈಗೊಳ್ಳಬೇಕು. ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ವಿದೇಶದಿಂದ ಪ್ರಜ್ವಲ್‌ ರೇವಣ್ಣರನ್ನು ಕರೆಸುವುದೇ ನಮ್ಮ ಆದ್ಯತೆಯ ಕೆಲಸ. ಕಾನೂನಾತ್ಮಕವಾಗಿ ಎಲ್ಲಾ ರೀತಿಯಲ್ಲೂ ಸಹಕರಿಸಲು ಎಸ್‌ಐಟಿ ಸಿದ್ಧವಿದೆ. ಹೀಗಾಗಿ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಕ್ಕೆ ಪ್ರಧಾನಿ ಮೋದಿ ಸೂಚನೆ ನೀಡಬೇಕು. ವಿದೇಶಾಂಗ ಸಚಿವಾಲಯದ ಮೂಲಕ ಕೂಡಲೇ ಕ್ರಮಕೈಗೊಳ್ಳಬೇಕು. ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿ ಮೂಲಕವೂ ಕ್ರಮಕೈಗೊಳ್ಳಬೇಕು. ಪ್ರಜಲ್ವ್ ಪಾಸ್‌ಪೋರ್ಟ್‌ ರದ್ದುಪಡಿಸಬೇಕು ಎಂದು ಮೇ ಮೊದಲ ವಾರ ಪ್ರಧಾನಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದರು.

Key words: Prajwal Revanna, case, CM Siddaramaiah, letter