Sunday, September 27, 2026

BDA Apartments

Home Front Page ಪ್ರಜ್ವಲ್ ರೇವಣ್ಣರನ್ನ ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಪ್ರಜ್ವಲ್ ರೇವಣ್ಣರನ್ನ ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಶಿವಮೊಗ್ಗ,ಏಪ್ರಿಲ್,29,2024 (www.justkannada.in):  ಲೈಂಗಿಕ ದೌರ್ಜನ್ಯ ಆರೋಪ  ಸಂಬಂಧ ಜೆಡಿಎಸ್ ಪಕ್ಷದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟಿಸಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಯಾರು ಎಲ್ಲಿ ಹೋಗುತ್ತಾರೆ ಎಂದು ಕಾಯಲು ಆಗೋದಿಲ್ಲ.ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದರು. ನಾವೇ ಹೇಳುತ್ತಿದ್ದೇವೆ ಸಮಗ್ರ ತನಿಖೆ ಆಗಬೇಕೆಂದು. ಬಿಜೆಪಿಗೂ ಇದಕ್ಕ ಯಾವುದೇ ರೀತಿಯ ಸಂಬಂಧ ಇಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ ಎಂದರು.ಪ್ರಜ್ವಲ್ ರೇವಣ್ಣರನ್ನ ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ hdk hdk 1

ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅಶ್ಲೀಲ ವೀಡಿಯೋ ಪ್ರಕರಣ ಹೊರ ಬಂದಿದ್ದು, ಪ್ರಕರಣವನ್ನ ಎಸ್ ಐಟಿ ತನಿಖೆಗೆ ನೀಡಲಾಗಿದೆ.

Key words: Prajwal Revanna, JDS, HD Kumaraswamy