ಪ್ರಜ್ವಲ್ ರೇವಣ್ಣಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬೆಂಗಳೂರು,ಜೂನ್,10,2024 (www.justkannada.in):  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಇಂದಿಗೆ ಎಸ್ ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣರನ್ನ ಎಸ್ ಐಟಿ ಅಧಿಕಾರಿಗಳು 42ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಇದೀಗ ಕೋರ್ಟ್ ಜೂನ್ 24ರವರೆಗೆ ಅಂದರೇ 14 ದಿನಗಳ ಕಾಲ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಈ ಮೂಲಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಪ್ರಕರಣ ಸಂಬಂಧ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಮೇ 31 ರಂದು ವಿದೇಶದಿಂದ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಬೆಂಗಳೂರಿನ ಏರ್ ಪೋರ್ಟ್ ನಲ್ಲೇ ಪ್ರಜ್ವಲ್ ರನ್ನ ಎಸ್ ಐಟಿ ಅಧಿಕಾರಿಗಳು ಬಂಧಿಸಿ ನಂತರ ಕೋರ್ಟ್ ಗೆ ಹಾಜರುಪಡಿಸಿದ್ದರು. ನಂತರ ತಮ್ಮ ಕಸ್ಟಡಿಗೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಕೋರ್ಟ್ ಪ್ರಜ್ವಲ್ ರೇವಣ್ಣರನ್ನ ಎಸ್ ಐಟಿ ಕಸ್ಟಡಿಗೆ ನೀಡಿತ್ತು.

Key words: Prajwal Revanna, judicial custody, 14 days