ಬೆಂಗಳೂರು,ಆಗಸ್ಟ್,1,2025 (www.justkannada.in): ಕೆಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದ ವಾದ ಪ್ರತಿವಾದ ಆಲಿಸಿದ್ದ ಬೆಂಗಳೂರಿನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಗಜಾನನ ಭಟ್ ಅವರು ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಇದೀಗ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.
ನಾಳೆ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಇನ್ನು ಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕುತ್ತಾ ಹೊರ ಬಂದಿದ್ದಾರೆ ಎನ್ನಲಾಗಿದೆ.
Key words: Prajwal Revanna, guilty, rape case, Court, verdict