ಬೆಂಗಳೂರು,ಮಾರ್ಚ್,30,2026 (www.justkannada.in): ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
86 ವರ್ಷದ ಸುವರ್ಣಲತಾ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಹೈದರಾಬಾದ್ ನಲ್ಲಿ ಕೊನೆಯುಸಿರೆಳೆದಿದ್ದಾರೆ. ನಟ ಪ್ರಕಾಶ್ ರಾಜ್ ಕುಟುಂಬದ ಹಿರಿಯ ಮಗನಾಗಿದ್ದು, ಅವರ ಸಹೋದರ ಪ್ರಸಾದ್ ರಾಜ್ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
ಪ್ರಕಾಶ್ ರಾಜ್ ಅವರ ವೈಯಕ್ತಿಕ ಬದುಕಿನ ಏರಿಳಿತಗಳ ಬಗ್ಗೆ ಮತ್ತು ತಾಯಿ ತೋರಿದ ಧೈರ್ಯದ ಬಗ್ಗೆ ಅನೇಕ ವೇದಿಕೆಯಲ್ಲಿ ಮುಕ್ತವಾಗಿ ಹಂಚಿಕೊಂಡಿದ್ದಾರೆ. ಹಸಿವು, ಬಡತನದಲ್ಲಿ ಬೆಂದ ಕುಟುಂಬವನ್ನು ತನ್ನ ಒಡಲಿನಲ್ಲಿಟ್ಟು ಮಕ್ಕಳನ್ನು ಲಾಲಿಸಿ, ಪಾಲಿಸಿ, ಪೋಷಿಸಿದ ತಾಯಿ ಸ್ವರ್ಣಲತಾ ಅವರ ಅಗಲಿಕೆ ಪ್ರಕಾಶ್ ರಾಜ್ ಮತ್ತು ಕುಟುಂಬದ ಸದಸ್ಯರನ್ನು ದುಃಖದಲ್ಲಿ ಮುಳುಗಿಸಿದೆ.
ತಾಯಿ ಸುವರ್ಣಲತಾ ನಿಧನಕ್ಕೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಖ್ಯಾತ ನಟ ಪವನ್ ಕಲ್ಯಾಣ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Key words: actor, Prakash Raj, mother, Death







