ಪ್ರತಾಪ್ ಸಿಂಹ ಅವರೇ, ಚಿಂತಿಸಬೇಡಿ: ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ- ರಾಜ್ಯ ಕಾಂಗ್ರೆಸ್ ಟ್ವೀಟ್.

ಬೆಂಗಳೂರು,ಜೂನ್,14,2023(www.justkannada.in):  ಈ ಹಿಂದೆ ಬಿಜೆಪಿ ಸರ್ಕಾರದ ಮೇಲೆ ಸರಣಿ ಭ್ರಷ್ಟಾಚಾರ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ನವರು ಈಗ ಅಧಿಕಾರದಲ್ಲಿದ್ದಾರೆ. ಈಗ ಅವರದ್ದೇ ಸರ್ಕಾರ ಇದೆ ತನಿಖೆ ಮಾಡಲಿ ಎಂದು ಹೇಳಿಕೆ ನೀಡಿದ್ಧ ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಪ್ರತಾಪ್ ಸಿಂಹ ಅವರೇ, ಚಿಂತಿಸಬೇಡಿ, ಬಿಜೆಪಿಯ ಎಲ್ಲಾ ಹಗರಣಗಳು, ಅಕ್ರಮಗಳು, ಲೂಟಿಗಳನ್ನು ತನಿಖೆಗೆ ವಹಿಸುತ್ತೇವೆ. ಮುಲಾಜು ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಯಾರೊಬ್ಬರ ಅಂಜಿಕೆಯೂ ನಮಗಿಲ್ಲ. ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ ಎಂದು ಹೇಳಿದೆ.

ತನಿಖೆಗೆ ತಾವೂ ಕೂಡ ಸಾಕ್ಷಿ ನೀಡಬಹುದು, ತಮ್ಮ ನಾಯಕರ ಲೂಟಿ ಬಗ್ಗೆ ನಿಮಗೆ ಹೆಚ್ಚು ತಿಳಿದಿರುತ್ತದೆ ಎಂದು ಟಾಂಗ್ ನೀಡಿದೆ.

Key words: Pratap Simha-  don’t worry-  BJP- Congress -tweet.