ಬಾನು ಮುಷ್ತಾಕ್ ​ರಿಂದ ಮೈಸೂರು ದಸರಾ ಉದ್ಘಾಟನೆ ತಡೆ ಕೋರಿ ಹೈಕೋರ್ಟ್ ಗೆ ಪ್ರತಾಪ್ ಸಿಂಹ ಅರ್ಜಿ

ಬೆಂಗಳೂರು, ಸೆಪ್ಟೆಂಬರ್​ ,6,2025 (www.justkannada.in):  ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್‌  ಅವರಿಂದ ಮೈಸೂರು ದಸರಾ ಉದ್ಘಾಟನೆಗೆ ತಡೆ ಕೋರಿ ಹೈಕೋರ್ಟ್ ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಾನು ಮುಷ್ತಾಕ್ ರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಮಾಜಿ ಸಂಸದ  ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು.  ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ,‌ ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ಆದರೆ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಅವರನ್ನು ಆಯ್ಕೆ ಮಾಡಿದೆ.

ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ.  ಹೀಗಾಗಿ ಬಾನು ಮುಷ್ತಾಕ್ ​ರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸುವಂತೆ ಹೈಕೋರ್ಟ್ ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Key words: Pratap Simha, High Court, inauguration, Mysore Dasara, Banu Mushtaq