Friday, September 11, 2026

BDA Apartments

Home Cinema ಕನ್ನಡದ ಕೋಟ್ಯಾಧಿಪತಿ ಹಾಟ್ ಸೀಟ್’ನಲ್ಲಿ ಪುನೀತ್ ರಾಜ್ ಕುಮಾರ್ ಜತೆ ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ...

ಕನ್ನಡದ ಕೋಟ್ಯಾಧಿಪತಿ ಹಾಟ್ ಸೀಟ್’ನಲ್ಲಿ ಪುನೀತ್ ರಾಜ್ ಕುಮಾರ್ ಜತೆ ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ

ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರೂಪಿಸುವ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಈ ವಾರ ಭಾಗವಹಿಸುತ್ತಿದ್ದಾರೆ.

ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪುನೀತ್ ಜತೆ ಜಂಟಿಯಾಗಿ ಕೋಟ್ಯಾಧಿಪತಿ ಆಡಲಿದ್ದಾರೆ.

ವಿಶೇಷವೆಂದರೆ ಇಬ್ಬರೂ ಬಿಜೆಪಿ ಸಂಸದರು ಆಡಿ ಸಿಕ್ಕ ಹಣವನ್ನು ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ದಾನ ಮಾಡಲಿದ್ದಾರೆ. ಆ ಮೂಲಕ ಕೋಟ್ಯಾದಿಪತಿಯಲ್ಲಿ ಇವರು ಎಷ್ಟು ಹಣ ಗೆಲ್ಲುತ್ತಾರೆ ಎಂದು ಕಾದು ನೋಡಬೇಕಿದೆ.