ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಂಡರು. ಆದರೆ ವಾಲ್ಮೀಕಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ದಾವಣಗೆರೆಯಲ್ಲಿ ಇಂದು ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿಯಾಗಿದೆ. ಕಾಂಗ್ರೆಸ್ ಪಕ್ಷದ ವಿರುದ್ದವೇ ಅವರ ಶಾಸಕರು ಮಾತನಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಸರ್ಕಾರ ಬರಲಿದೆ ಎಂದರು.
ಅರವಿಂದ ಲಿಂಬಾವಳಿ, ರಮೇಶ್ ಜಾರಕಿಹೊಳಿ, ಕುಮಾರ ಬಂಗಾರಪ್ಪ ಅವರು ವಾಲ್ಮಿಕಿ ಹಗರಣ ಬಯಲಿಗೆ ತಂದರು. ವಾಲ್ಮಿಕಿ ನಿಗಮ ಹಣ ಅಕ್ರಮ ವರ್ಗಾವಣೆ ಬೆಳಕಿಗೆ ತಂದಿದ್ದಾರೆ. ಮುಡಾ ಕೇಸ್ ನಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುವುದನ್ನ ತಪ್ಪಿಸಿಕೊಂಡಿದ್ದಾರೆ. ಆದರೆ ವಾಲ್ಮೀಕಿ ನಿಗಮದ ಹಗರಣದಲ್ಲಿ ಜೈಲಿಗೆ ಹೋಗಲಿದ್ದಾರೆ. ಹಗರಣ ತನಿಖೆಯನ್ನ ಹೈಕೋರ್ಟ್ ಸಿಬಿಐಗೆ ನೀಡಿದೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು ಪ್ರತಾಪ್ ಸಿಂಹ ಹೇಳಿದರು.
Key words: Congress, Siddaramaiah, jail, Prathap Simha