ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿದ ಮಾಜಿ ಸಂಸದ: ಅರ್ಜಿ ವಜಾಗೊಳಿಸಿದ ಕೋರ್ಟ್.

ಬೆಂಗಳೂರು,ಸೆಪ್ಟಂಬರ್,15,2025 (www.justkannada.in):  ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನ ಆಯ್ಕೆ ಮಾಡಿದ್ದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ (Banu Mushtaq) ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ  ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠ  ವಜಾಗೊಳಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ, ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದೆ.

ಇನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಾದ ಮಂಡಿಸಿದ ವಕೀಲ ಸುದರ್ಶನ್, ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ. ಅವರು ಹಿಂದೂ ವಿರೋಧಿ, ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯ ಸಂಪ್ರದಾಯವಿದೆ. ಆದರೆ, ಬಾನು ಮುಷ್ತಾಕ್ ಅವರಿಂದ ಉದ್ಘಾಟನೆಗೆ ವಿರೋಧವಿದೆ ಎಂದರು.

Key words: Former MP, Prathap Simha, Banu Mushtaq, Dasara, High Court