ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ನೀಡಲು ಸಿದ್ಧ ಎಂದ ಶಾಸಕ ಎಂ.ಪಿ ರೇಣುಕಾಚಾರ್ಯ.

ದಾವಣಗೆರೆ,ಜುಲೈ,27,2022(www.justkannada.in): ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ನೀಡಲು ಸಿದ್ಧ ಎಂದಯ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ನಮ್ಮ ಕಾರ್ಯಕರ್ತ ಪ್ರವೀಣ್ ಹತ್ಯೆಯಿಂದ ಬೇಸರವಾಗಿದೆ.   ನಮ್ಮ ಕಾರ್ಯಕರ್ತರು ನನಗೆ ಕರೆ ಮಾಡುತ್ತಿದ್ದಾರೆ. ಅವರಿಗೆ ಉತ್ತರ ಕೊಡಲು ಆಗುತ್ತಿಲ್ಲ.  ಅಧಿಕಾರಕ್ಕೆ ನಾನು ಅಂಟಿಕೊಂಟು ಕೂರಲ್ಲ.

ನಾಳೆ ನಾನು ಕ್ಷೇತ್ರಕ್ಕೆ ಹೋಗಿ ಸಭೆ ಮಾಡುತ್ತೇನೆ. ಕಾರ್ಯಕರ್ತರು ಹೇಳಿದಂತೆ ಕೇಳುತ್ತೇನೆ . ನಾನು ರಾಜೀನಾಮೆ ನೀಡಲು ಸಿದ್ಧ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

Key words: Praveen-murder- case-MLA-MP Renukacharya