ಪ್ರವೀಣ್ ಹತ್ಯೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಹಾಗೂ ಪಿಎಫ್ ಐ, ಎಸ್ ಡಿಪಿಐ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆ.

ಬೆಂಗಳೂರು,ಜುಲೈ,28,2022(www.justkannada.in):  ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಗಳ ವಿರುದ್ಧ ಕಠಿಣ ಕ್ರಮ ಹಾಗೂ ಪಿಎಫ್ ಐ, ಎಸ್ ಡಿಪಿಐ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಟೌನ್ ಹಾಲ್ ಬಳಿ ವಿವಿಧ ಹಿಂದೂ ಪರ ಸಂಘಟನೆಯ ನೂರಾರು ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಪಾಲ್ಗೊಂಡಿದ್ದು, ಟೌನ್ ಹಾಲ್ ಬಳಿ ಬಿಗಿ ಪೊಲೀಸ್  ಭದ್ರತೆ ನಿಯೋಜಿಸಲಾಗಿದೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿರುವ ಚಕ್ರವರ್ತಿ ಸೂಲಿಬೆಲೆ, ಇದು ಇಲ್ಲಿಗೆ ನಿಲ್ಲಲ್ಲ. ಬಿಜೆಪಿ ಕಾರ್ಯಕರ್ತರ ಕೊಲೆ ಆಗುತ್ತಿವೆ.  ಹಂತಕರನ್ನ ನಡುಬೀದಿಯಲ್ಲಿ ನಿಲ್ಲಿಸಿ ಶೂಟ್ ಮಾಡಬೇಕು. ನಮ್ಮ ಸರ್ಕರದ ವಿರುದ್ದವೇ ಕೂಗುವಂತಹ ಪರಿಸ್ಥಿತಿ ಬಂದಿದೆ. ಕಾರ್ಯಕರ್ತರು  ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಕಿಡಿಕಾರಿದರು.

Key words: Praveen-murder-case- Protest -strict action-against- accused