Saturday, August 15, 2026

BDA Apartments

Home Crime ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ.

ಮಂಗಳೂರು,ಜುಲೈ,28,2022(www.justkannada.in):  ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಝಾಕೀರ್ ಮತ್ತು ಶಫೀಕ್ ಬಂಧಿತ ಆರೋಪಿಗಳು. ಪ್ರವೀಣ್ ಹತ್ಯೆಯಾದ ಎರಡು ದಿನಗಳ ಬಳಿಕ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಎಡಿಜಿಪಿ ಅಲೋಕ್ ಕುಮಾರ್, ಪ್ರಕರಣ ಸಂಬಂಧ ಝಾಕೀರ್  ಮತ್ತು ಶಫೀಕ್ ರನ್ನು  ಬಂಧಿಸಿದ್ದೇವೆ. ನಿನ್ನೆ ಸಂಜೆಯೇ ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಇಂದು ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನ ಕೋರ್ಟ್ ಗೆ ಹಾಜರು ಪಡಿಸಿ ವಶಕ್ಕೆ ಪಡೆಯುತ್ತೇವೆ. ಸಂಪೂರ್ಣವಾಗಿ ತನಿಖೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Key words: Praveen Nettaru –murder- case-Arrest – two -accused.