ಸಿಎಂ ಬಿಎಸ್ ವೈ ಆರೋಗ್ಯ ಚೇತರಿಕೆಗೆ ಡಿ.ಕೆ ಬ್ರದರ್ಸ್ ಸೇರಿ ಹಲವರಿಂದ ಪ್ರಾರ್ಥನೆ….

ಬೆಂಗಳೂರು,ಆ,1,2020(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು ತಗುಲಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ  ಸಿಎಂ ಬಿಎಸ್ ಯಡಿಯೂರಪ್ಪ ಶೀಘ್ರಗುಣಮುಖರಾಗಲೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ಸೇರಿ ಹಲವು ನಾಯಕರು  ಟ್ವೀಟ್ ಮಾಡಿ ಪ್ರಾರ್ಥಿಸಿದ್ದಾರೆjk-logo-justkannada-logo

ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿಎಂ ಬಿಎಸ್ ಯಡಿಯೂರಪ್ಪ ಆರೋಗ್ಯ ಚೇತರಿಕೆಯಾಗಲಿ ಅವರು ಶೀಘ್ರಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಹಾಗೆಯೇ ಸಂಸದ ಡಿ.ಕೆ ಸುರೇಶ್ ಟ್ವಿಟ್ ಮಾಡಿ, ಸಿಎಂ ಬಿಎಸ್ ಯಡಿಯೂರಪ್ಪ ಶೀಘ್ರಗುಣಮುಖರಾಗಲಿ ಎಂದು ಹಾರೈಸಿದ್ದಾರೆ.prayers-dk-brothers-cm-bs-yeddyurappa-corona-health-recovery

ಇನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿ, ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳೆ ನೋವಾಗಿದೆ. ಅವರು ಶೀಘ್ರ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿದ್ದಾರೆ. ಇನ್ನು ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಬಿ.ಸಿ ಪಾಟೀಲ್ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಹಲವು ನಾಯಕರು ಸಿಎಂ ಬಿಎಸ್ ವೈ ಆರೋಗ್ಯ ಚೇತರಿಕೆಗೆ ಹಾರೈಸಿದ್ದಾರೆ.

Key words: Prayers – DK Brothers – CM BS Yeddyurappa- corona-Health- Recovery