Friday, August 21, 2026

BDA Apartments

Home Front Page ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿಲ್ಲ- ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿಲ್ಲ- ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ.

ಬೆಂಗಳೂರು,ಡಿಸೆಂಬರ್,6,2022(www.justkannada.in):  ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸ್ಥಗಿತ ಮಾಡಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ,  1-8ನೇ ತರಗತಿ SC-ST ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತ ಮಾಡಿಲ್ಲ. ವಿದ್ಯಾರ್ಥಿ ವೇತನ ಸ್ಥಗಿತ ಮಾಡಿದ್ದಾರೆ ಎಂಬುದು ಸುಳ್ಳು.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮ  ಸಂಪೂರ್ಣ ರಾಜ್ಯ ವಲಯದ ಯೋಜನೆ.  ಇದರಲ್ಲಿ ಯಾವುದೇ ಗೊಂದಲವಿಲ್ಲ. ಯೋಜನೆ ಹಿಂದಿನಂತೆಯೇ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಯೋಜನೆ ನಿಲ್ಲಿಸುವುದಿಲ್ಲ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

Key words: Pre-matric- scholarship- not –stop-Minister- Kota Srinivas Pujari