Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Cinema ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳಿಗೆ ತಾಯಿಯಾದ ಪ್ರೀತಿ ಜಿಂಟಾ

ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳಿಗೆ ತಾಯಿಯಾದ ಪ್ರೀತಿ ಜಿಂಟಾ

ಬೆಂಗಳೂರು, ನವೆಂಬರ್ 18, 2021 (www.justkannada.in): ಪ್ರೀತಿ ಜಿಂಟಾ ಮತ್ತು ಅವರ ಪತಿ ಜೀನ್ ಗುಡ್‌ಇನಫ್ ದಂಪತಿ ಸಿಹಿ ಸುದ್ದಿಯೊಂದನ್ನು ಇನ್‌ಸ್ಟಾಗ್ರಾಂ ಮೂಲಕ ಹಂಚಿಕೊಂಡಿದ್ದಾರೆ.

ಹೌದು. ಬಾಲಿವುಡ್ ನಟಿ, ಪಂಜಾಬ್ ಕಿಂಗ್ಸ್ ಐಪಿಎಲ್ ತಂಡದ ಸಹ ಮಾಲೀಕತ್ವ ಹೊಂದಿರುವ ಪ್ರೀತಿ ಜಿಂಟಾ, ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದಿದ್ದಾರೆ.

ಅವಳಿ ಮಕ್ಕಳಿಗೆ ಜೈ ಜಿಂಟಾ ಗುಡ್‌ಇನಫ್ ಮತ್ತು ಜಿಯಾ ಜಿಂಟಾ ಗುಡ್‌ಇನಫ್ ಎಂಬ ಹೆಸರು ಇರಿಸಲಾಗಿದೆ. ಅವರನ್ನು ನಮ್ಮ ಕುಟುಂಬಕ್ಕೆ ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದ್ದೇವೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಪ್ರೀತಿ ಜಿಂಟಾ ಅವರು ಜೀನ್ ಗುಡ್‌ಇನಫ್ ಅವರನ್ನು 2016ರ ಫೆಬ್ರುವರಿ 29ರಂದು ಮದುವೆಯಾಗಿದ್ದು, ಬಳಿಕ ಅಮೆರಿಕದಲ್ಲಿ ನೆಲೆಸಿದ್ದಾರೆ.