ಸೆ.1 ರಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು,ಆಗಸ್ಟ್,19,2025 (www.justkannada.in): ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (AIISH) ಸಿಲ್ವರ್ ಜ್ಯುಬಿಲಿ(ಬೆಳ್ಳಿ ಮಹೋತ್ಸವ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೆಪ್ಟಂಬರ್ 1 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದಾರೆ.

ಸೆಪ್ಟೆಂಬರ್ 1 ರಂದು ಮೈಸೂರಿನ ಐಶ್(AIISH)ನಲ್ಲಿ ಸಿಲ್ವರ್ ಜ್ಯುಬಿಲಿ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ದ್ರೌಪದಿ  ಮುರ್ಮು ಅವರು ಪಾಲ್ಗೊಳ್ಳುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು  ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕಿ ಎಂ. ಪುಷ್ಪಾವತಿ ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ನೀಡುತ್ತಿರುವ ಎರಡನೇ ಭೇಟಿ ಇದಾಗಿದ್ದು, ಸೆಪ್ಟೆಂಬರ್ 26, 2022 ರಂದು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಆಗಮಿಸಿದ್ದರು. ಸೆಪ್ಟಂಬರ್ 1 ರಂದು  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಬರಲಿದ್ದಾರೆ.

ರಾಷ್ಟ್ರಪತಿಯವರ ಭೇಟಿಯ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ ಅವರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಅವರ ಭೇಟಿಯ ಸಮಯದಲ್ಲಿ ಯಾವುದೇ ಭದ್ರತಾ ಲೋಪವಾಗಬಾರದು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Key words: President, Draupadi Murmu, visit, Mysore, September 1