ಡಿ.16 ರಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು.

ಮಂಡ್ಯ, ಡಿಸೆಂಬರ್​, 12,2025 (www.justkannada.in): ಡಿಸೆಂಬರ್ 16 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಕ್ಕೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯ ಮುನ್ಸಿಪಲ್ ಮೈದಾನದಲ್ಲಿ ಡಿಸೆಂಬರ್ 16ರಿಂದ 21ರವರೆಗೆ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿ ಮಹೋತ್ಸವವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಡಿಸೆಂಬರ್ 16ರ ಮಧ್ಯಾಹ್ನ 2.10ಕ್ಕೆ ಮೈಸೂರಿನ  ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಳಿಕ ಹೆಲಿಕಾಪ್ಟರ್ ​ನಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿಗೆ ತೆರಳುತ್ತಾರೆ. ಮಳವಳ್ಳಿಯಲ್ಲಿ ನಡೆಯುವ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಸಂಜೆ 5.25ಕ್ಕೆ ಮಳವಳ್ಳಿಯಿಂದ ಮೈಸೂರಿಗೆ ಹಿಂದಿರುಗಲಿದ್ದಾರೆ. ಡಿಸೆಂಬರ್ 16ರಂದು ರಾತ್ರಿ ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿರುವ ದ್ರೌಪದಿ ಮುರ್ಮು ಅವರು,  ಡಿಸೆಂಬರ್ 17ರ ಬೆಳಗ್ಗೆ 9.25ಕ್ಕೆ ಮೈಸೂರಿನಿಂದ ತಿರುಪತಿಗೆ  ತೆರಳಲಿದ್ದಾರೆ.

Key words: President, Draupadi Murmu , state , December 16