ಸಿದ್ಧಗಂಗಾ ಮಠ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತು- ರಾಷ್ಟ್ರಪತಿ ದ್ರೌಪದಿ ಮುರ್ಮು

ತುಮಕೂರು,ಏಪ್ರಿಲ್,1,2026 (www.justkannada.in):  ಸಿದ್ಧಗಂಗಾ ಮಠವು ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ನುಡಿದರು.

ಸಿದ್ದಗಂಗಾ ಮಠದ ಶಿವೈಕ್ಯ  ಶ್ರೀ ಶಿವಕುಮಾರ ಸ್ವಾಮೀಜಿಗಳ  119ನೇ ಜನ್ಮದಿನೋತ್ಸವ ಹಿನ್ನೆಲೆ ಮಠದಲ್ಲಿ ಸಂಭ್ರಮ ಕಳೆಗಟ್ಟಿದ್ದು ಇಂದು ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು.

ಬಳಿಕ ಶಿವಕುಮಾರ ಸ್ವಾಮೀಜಿ ಅವರ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು,  ಸಿದ್ದಗಂಗಾ ಮಠಕ್ಕೆ ಬಂದಿರುವುದು ನನಗೆ ಖುಷಿಯಾಗಿದೆ. ಬಡ ಮಕ್ಕಳಿಗೆ ಶಿಕ್ಷಣ ದಾಸೋಹ, ಆಶ್ರಯದ ಮೂಲಕ ಮಠ ಸೇವೆ ಮಾಡುತ್ತಿದೆ.  ಈ ಮಠವೂ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ. ಸಿದ್ದಗಂಗಾ ಮಠವು ಬಸವಣ್ಣ ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಿದೆ.  ದಯೆಯೇ ಧರ್ಮದ ಮೂಲವಯ್ಯ ಎಂಬಂತೆ ಶ್ರಿ ಮಠ ನಡೆಯುತ್ತಿದೆ ಎಂದು ತಿಳಿಸಿದರು.

Key words: Siddaganga Math, spiritual heritage, President, Draupadi Murmu