Thursday, August 13, 2026

BDA Apartments

Home Front Page ಬ್ರಿಟನ್ ರಾಣಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಲಂಡನ್ ಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬ್ರಿಟನ್ ರಾಣಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಲಂಡನ್ ಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು, ಸೆಪ್ಟೆಂಬರ್ 18, 2022 (www.justkannada.in): ಬ್ರಿಟನ್ ರಾಣಿ ಎಲಿಜಬೆತ್-II ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಲಂಡನ್ ಗೆ ಆಗಮಿಸಿದ್ದಾರೆ.

ಸೆಪ್ಟೆಂಬರ್ 19 ರಂದು ಬ್ರಿಟನ್ ರಾಣಿ ಎಲಿಜಬೆತ್-II ಅಂತ್ಯಕ್ರಿಯೆ ನಡೆಯಲಿದೆ.  ಖಾಸಗಿ ವಿಮಾನದಲ್ಲಿ ಇಂಗ್ಲೆಂಡ್‍ಗೆ ತೆರಳಿದ್ದ ದ್ರೌಪದಿ ಮುರ್ಮು, ಭಾರತದ ಪರವಾಗಿ ರಾಜಮನೆತನಕ್ಕೆ ಸಂತಾಪ ಸೂಚಿಸಲಿದ್ದಾರೆ.

ಸೆಪ್ಟೆಂಬರ್ ೮ ರಂದು ಸ್ಕಾಟ್ಲೆಂಡ್ ನ ಬಾಲ್ಮೋರಲ್ ಕ್ಯಾಸಲ್‌ ನಲ್ಲಿರುವ ನಿವಾಸದಲ್ಲಿ 96 ವರ್ಷ ವರ್ಷದ ರಾಣಿ ಎಲಿಜಬೆತ್‌ ನಿಧನರಾಗಿದ್ದರು.

ನಾಳೆ (ಸೆಪ್ಟೆಂಬರ್ 19) ಬೆಳಿಗ್ಗೆ ವೆಸ್ಟ್‌ಮಿನ್‌ಸ್ಟರ್‌ ಅಬ್ಬೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ಕುರಿತು ರಾಷ್ಟ್ರಪತಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.