Saturday, August 15, 2026

BDA Apartments

Home Front Page ನಾಳೆ ಮೈಸೂರು ಜಿಲ್ಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ: ಸಿದ್ದತೆಗೆ ಡಿಸಿ ಡಾ. ಕೆ.ವಿ ರಾಜೇಂದ್ರ...

ನಾಳೆ ಮೈಸೂರು ಜಿಲ್ಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ: ಸಿದ್ದತೆಗೆ ಡಿಸಿ ಡಾ. ಕೆ.ವಿ ರಾಜೇಂದ್ರ ಸೂಚನೆ.

ಮೈಸೂರು,ಆಗಸ್ಟ್,4,2023(www.justkannada.in): ರಾಷ್ಟ್ರಪತಿ ದ್ರೌಪದಿ ಮುರ್ಮ್ ಅವರು ನಾಳೆ ಮೈಸೂರು ಜಿಲ್ಲೆಗೆ ಆಗಮಿಸಲಿದ್ದು ಸಿದ್ದತೆಗೆ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೂಚನೆ ನೀಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಮಧ್ಯಾಹ್ನ 12.30 ಗಂಟೆಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ  ಆಗಮಿಸಿ ನಂತರ ಮಧುಮಲೈಗೆ ನಿರ್ಗಮಿಸುವರು. ನಂತರ ಸಂಜೆ 5.45 ಗಂಟೆಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ನಿರ್ಗಮಿಸುವರು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾನಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದರು. ರಾಷ್ಟ್ರಪತಿ ಆಗಮಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅನಾನುಕೂಲ ಆಗದಂತೆ ಶಿಷ್ಟಾಚಾರ ಪ್ರಕಾರ ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು, ಗೊಂದಲಕ್ಕೆ ಆಸ್ಪದ ಇಲ್ಲದಂತೆ ಇಲಾಖೆಗಳು ಸಮನ್ವಯದೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ರೂಮ್ ಗಳ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಗಳು ಪರಿಶೀಲಿಸಬೇಕು. ಅದೇ ರೀತಿ ವಿದ್ಯುಚ್ಛಕ್ತಿ ಹಾಗೂ ಪರ್ಯಾಯ ವ್ಯವಸ್ಥೆ ಸಮರ್ಪಕವಾಗಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ವರದಿ ನೀಡಬೇಕೆಂದರು. ವಿಮಾನ ನಿಲ್ದಾಣ, ಕಾರ್ಯಕ್ರಮ ಸ್ಥಳದಲ್ಲಿ ತುರ್ತು ವೈದ್ಯಕೀಯ ವ್ಯವಸ್ಥೆ, ವೈದ್ಯರ ತಂಡ, ಆಂಬ್ಯುಲೆನ್ಸ್‌ ಗಳನ್ನು ನಿಯೋಜಿಸಬೇಕು ಎಂದು ಅವರು ತಿಳಿಸಿದರು. ಆಹಾರ ಸುರಕ್ಷತೆ, ಭದ್ರತೆ ಮತ್ತು ಶಿಷ್ಟಾಚಾರ ಪಾಲನೆಗೆ ಅಧಿಕಾರಿಗಳ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

Key words: President-Draupadi Murmu -will –arrive-Mysore –district- tomorrow-DC. KV Rajendra