ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕಿ- ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ.

ಬೆಳಗಾವಿ,ಡಿಸೆಂಬರ್,26,2022(www.justkannada.in): ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಸರ್ಕಾರಕ್ಕೆ  ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದರು.

ಇಂದು ವಿಧಾನಸಭಾ ಕಲಾಪದಲ್ಲಿ ಮೀಸಲಾತಿ ವಿಚಾರ ಚರ್ಚೆಯಾಯಿತು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ನೀವು ಅವರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದೀರಾ…? ಮೀಸಲಾತಿ ಹೆಚ್ಚಳದ  ಬಗ್ಗೆ ಈವರೆಗೆ ಕೇಂದ್ರದ ಮೇಲೆ ಒತ್ತಡ ಹಾಕಿಲ್ಲ. ಮೀಸಲಾತಿ ಪ್ರಮಾಣ ಹೆಚ್ಚಳದ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹಾಕಿ. ಎಸ್.ಸಿ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ನಮ್ಮ ಬೆಂಬಲವಿದೆ. ಕಾಂಗ್ರೆಸ್ ಪಕ್ಷ ಮೀಸಲಾತಿ ಹೆಚ್ಚಳದ ಪರ ಇದೆ ಎಂದು ಒತ್ತಾಯಿಸಿದರು.

Key words: pressure – Center -increase -SC and ST reservation- Former CM -Siddaramaiah