ಬೆಲೆ ಏರಿಕೆ ಬಿಸಿ ಮತ್ತಷ್ಟು ಹೆಚ್ಚಲಿದೆ, ಕೂಡಲೇ ಕ್ರಮ ವಹಿಸಿ: ಕೇಂದ್ರಕ್ಕೆ ರಾಹುಲ್ ಗಾಂಧಿ ಸಲಹೆ

ಬೆಂಗಳೂರು, ಮಾರ್ಚ್ 19, 2022 (www.justkannada.in): ಬೆಲೆ ಏರಿಕೆ ಬಿಸಿ ಮತ್ತಷ್ಟು ಹೆಚ್ಚಲಿದೆ. ಕೂಡಲೇ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮತ್ತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲಬೆಲೆ ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದ ದೇಶದ ಜನರಿಗೆ ಹೊರೆಯಾಗುವ ಸಾಧ್ಯತೆ ಇದೆ. ಕೂಡಲೇ ಕೇಂದ್ರ ಸರ್ಕಾರ ಅಗತ್ಯ ಕ್ರಮ‌ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಹಣದುಬ್ಬರದ ಭಾರ ಎಲ್ಲಾ ಭಾರತೀಯರಿಗೂ‌ ಹೊರೆಯಾಗಿ ಪರಿಣಮಿಸಿದೆ” ಅಂತ ರಾಹುಲ್ ಗಾಂಧಿ ಟ್ವಿಟ್ಟರ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸುವ ಮುನ್ನವೇ ದಾಖಲೆಯ ಪ್ರಮಾಣದಲ್ಲಿ ಬೆಲೆ ಏರಿಕೆ ಆಗಿತ್ತು. ಇದರಿಂದ ಬಡ ಮತ್ತು ಮಧ್ಯಮ ವರ್ಗಕ್ಕೆ ಹೊರೆಯಾಗಿತ್ತು. ಬೆಲೆ ಏರಿಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.