ಬೆಂಗಳೂರು,ನವೆಂಬರ್,3,2026 (www.justkannada.in): ರಾಜ್ಯದಲ್ಲಿ ಪ್ರತಿ ಲೀಟರ್ ನಂದಿನಿ ಹಾಲಿಗೆ 8 ರೂ. ಮತ್ತು ಮೊಸರಿಗೆ 14 ರೂ. ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಈ ಬೆನ್ನಲ್ಲೆ ಇದೀಗ ಸಿಎಂ ಡಿಕೆ ಶಿವಕುಮಾರ್ ಮೊಸರಿನ ದರ ಕೊಂಚ ಇಳಿಕೆಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಂದಿನಿ ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ. ಇಳಿಸುವಂತೆ ಸಿಎಂ ಡಿ.ಕೆ ಶಿವಕುಮಾರ್ ಕರ್ನಾಟಕ ಹಾಲು ಮಹಾಮಂಡಳಿಗೆ (KMF) ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕೆಎಂಎಫ್ ಹಾಲಿಗೆ 8 ರೂ. ಮತ್ತು ಮೊಸರಿಗೆ 14 ರೂ. ದರ ಏರಿಕೆ ಮಾಡಿ ಜನಸಾಮಾನ್ಯರಿಗೆ ಶಾಕ್ ನೀಡಿದೆ. ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನಸಾಮಾನ್ಯರು, ಹೋಟೆಲ್ ಮಾಲೀಕರು ಹಾಗೂ ವಿಪಕ್ಷಗಳು ಸರ್ಕಾರದ ಈ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಡಿಕೆ ಶಿವಕುಮಾರ್ , ಕೆಎಂಎಫ್ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮೊಸರಿನ ದರವನ್ನು ಇಳಿಸಲು ನಿರ್ದೇಶನ ನೀಡಿದ್ದಾರೆ. ಮೊಸರಿನ ಮೇಲಿನ ದರವನ್ನು ಲೀಟರ್ ಗೆ 2 ರೂ. ಕಡಿಮೆ ಮಾಡಲು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.







