Saturday, August 15, 2026

BDA Apartments

Home Front Page ಬೆಲೆ ಏರಿಕೆ ಹಿನ್ನೆಲೆ: ಕೇಂದ್ರ ಸರ್ಕಾರದ ವಿರುದ್ದ ಮೈಸೂರಿನಲ್ಲಿ ರಾಜ್ಯ  ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ...

ಬೆಲೆ ಏರಿಕೆ ಹಿನ್ನೆಲೆ: ಕೇಂದ್ರ ಸರ್ಕಾರದ ವಿರುದ್ದ ಮೈಸೂರಿನಲ್ಲಿ ರಾಜ್ಯ  ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ …

ಮೈಸೂರು,ಜ,3,2020(www.justkannada.in):  ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ರಾಜ್ಯಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

ನಗರದ ಗಾಂಧಿಚೌಕದ ಬಳಿ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಮಹಿಳಾ ಘಟಕದ ಸದಸ್ಯರು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಬ್ಸಿಡಿ ರಹಿತ ಎಲ್ ಪಿಜಿ ಗ್ಯಾಸ್ ದರ ಏರಿಕೆ ಖಂಡಿಸಿ ಒಲೆ ಮೇಲೆ ಪಾತ್ರೆ ಇರಿಸಿ ಸೌದೆ ಹಾಕಿ ಅಣುಕು ಪ್ರದರ್ಶನದ ಮೂಲಕ ಅಕ್ರೋಶ ವ್ಯಕ್ತಪಡಿಸಿದರು.

ಔಷಧಿ ಬೆಲೆ ಏರಿಕೆ, ಈರುಳ್ಳಿಬೆಲೆ ಏರಿಕೆ, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಅಡುಗೆ ಎಣ್ಣೆ ಏರಿಕೆ, ಪೆಟ್ರೋಲ್ ಡೀಸೆಲ್ ಬೆಲೆ, ರೈಲ್ವೆ ಪ್ರಯಾಣದ ದರ ಏರಿಕೆ ಹೊಸ ವರ್ಷದಲ್ಲಿ ಬಡವರಿಗೆ, ರೈತರಿಗೆ ಮತ್ತು ಮಹಿಳೆಯರಿಗೆ ಕೇಂದ್ರ ಬಿಜೆಪಿ ಸರ್ಕಾರ ನೀಡಿರುವ ಕೊಡುಗೆ ಎಂದು ಪ್ರತಿಭಟನಾಕಾರರು ವ್ಯಂಗ್ಯವಾಡಿದರು.

key words: Price rise – Mysore- State Congress women unit -Mysore