Friday, October 23, 2026

Dasara Wishes

ಸಿಡಿ ವಿಚಾರದಲ್ಲಿ 5 ಕೋಟಿ ವ್ಯವಹಾರದ ಬಗ್ಗೆ ಮೊದಲೇ ಹೇಳಿದ್ದೆ- ಮಾಜಿ ಸಿಎಂ ಹೆಚ...
Happy Dasara
Home Front Page ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ.

ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ.

ಶಿವಮೊಗ್ಗ,ಮಾರ್ಚ್,18,2024(www.justkannada.in):  ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಇಂದು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

ವಿಶೇಷ ವಿಮಾನದ ಮೂಲಕ ಶಿವಮೊಗ್ಗ ಏರ್ ಪೋರ್ಟ್ ಗೆ ಪ್ರಧಾನಿ ಮೋದಿ ಆಗಮಿಸಿದ್ದು ನಗರದ ಫ್ರೀಡಂಪಾರ್ಕ್ ನ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ರಸ್ತೆ ಮೂಲಕ ಸಮಾವೇಶಕ್ಕೆ ತೆರಳಲಿದ್ದಾರೆ.ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ modi modi 1

ಕಳೆದ ಶನಿವಾರ ಪ್ರಧಾನಿ ಮೋದಿ ಕಲ್ಬುರ್ಗಿಗೆ ಭೇಟಿ ನೀಡಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದರು. ಇಂದು ಶಿವಮೊಗ್ಗದಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

Key words: Prime Minister- Modi -arrives – Shimoga.