ತಾಯಿ ಹೀರಾಬೆನ್ ಅಂತ್ಯಕ್ರಿಯೆ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ಪ್ರಧಾನಿ ಮೋದಿ

ಗಾಂಧಿನಗರ,ಡಿಸೆಂಬರ್,30,2022(www.justkannada.in):  ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾ ಬೆನ್ ಅವರು ಇಂದು ಮುಂಜಾನೆ ಅನಾರೋಗ್ಯದಿಂದ ನಿಧನರಾದರು ಬಳಿಕ ಅಂತ್ಯಕ್ರಿಯೆಯೂ ನೆರವೇರಿತು. ತಾಯಿಯ ಅಂತ್ಯಸಂಸ್ಕಾರ ನೆರವೇರಿಸಿದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಗಾಂಧಿನಗರದ ಸೆಕ್ಟರ್ 30 ರ ರುದ್ರಭೂಮಿಯಲ್ಲಿ ಹೀರಾಬೆನ್ ಅವರ ಅಂತ್ಯಕ್ರಿಯೆ ನೆರವೇರಿತು.  ತಾಯಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ನರೇಂದ್ರ ಮೋದಿ ಅವರು ಅಂತಿಮ ವಿಧಿ ವಿಧಾನ ನೆರವೇರಿಸಿದ ನಂತರ ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ. PM Modi- Complete -confidence -uplift – country- economy.

ಯಥಾಸ್ಥಿತಿಯಾಗಿ ತಮ್ಮ ಕರ್ತವ್ಯ ಮುಂದುವರಿಸಿರುವ ಮೋದಿ ನಿಗದಿಯಂತೆ ದಿನವಿಡೀ ಪಶ್ಚಿಮ ಬಂಗಾಳದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಕರ್ತವ್ಯಕ್ಕೆ ಹಾಜರಾಗುವರು. ಈಗಾಗಲೇ ಪ್ರಧಾನಿ ಮೋದಿ ಅವರು ಗುಜರಾತ್ ರಾಜಭವನ ತಲುಪಿದ್ದಾರೆ ಎನ್ನಲಾಗಿದೆ.

ಕೊಲ್ಕತ್ತಾದಲ್ಲಿ ಗಂಗಾನದಿ ಸ್ವಚ್ಛತೆ ಸಂಬಂಧ ಸಭೆ ನಡೆಸುವರು. ಪಶ್ಚಿಮ ಬಂಗಾಳದಲ್ಲಿ 2800 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಭಾಗವಹಿಸುವರು.

Key words: Prime Minister- Modi -attended – duty -after – funeral –mother- Heeraben.