ಪ್ರಧಾನಿ ಮೋದಿ ಜನ್ಮದಿನ ಅರ್ಥಪೂರ್ಣ ಆಚರಣೆ: ಬಿಜೆಪಿ ಯುವಮೋರ್ಚ ಕಾರ್ಯಕರ್ತರಿಂದ ರಕ್ತದಾನ ಶಿಬಿರ…

ಬೆಂಗಳೂರು,ಸೆಪ್ಟಂಬರ್,17,2020(www.justkannada.in):  ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಗುರುವಾರ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವಮೋರ್ಚ ಕಾರ್ಯಕರ್ತರು ರಕ್ತದಾನ ಮಾಡಿದರು.prime-minister-modi-birthday-celebration-blood-donation-camp-bjp-youth-activist

ಮಲ್ಲೇಶ್ವರ 13ನೇ ಅಡ್ಡರಸ್ತೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ನೂರಾರು ಮಂದಿ ರಕ್ತದಾನ ಮಾಡಿದರು. ನರೇಂದ್ರ ಮೋದಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಮುನ್ನಡೆಯುವುದಾಗಿ ಪ್ರತಿಜ್ಞೆ ಮಾಡಿದರು.

ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥನಾರಾಯಣ, ಪಕ್ಷಕ್ಕಾಗಿ ದೇಶಕ್ಕಾಗಿ ತಮ್ಮ ಸರ್ವಸ್ವವನ್ನು ಅರ್ಪಿಸಿ ಕೆಲಸ ಮಾಡುತ್ತಿರುವ ಪ್ರಧಾನಿಯರ ದಾರಿಯಲ್ಲೇ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರು.

ಪಕ್ಷಕ್ಕಾಗಿ ಪ್ರತಿಯೊಬ್ಬರು ಅರ್ಪಣಾ ಮನೋಭಾವದಿಂದ ಕೆಲಸ ಮಾಡಬೇಕು. ಸೋಮಾರಿಗಳಿಗೆ ಇಲ್ಲಿ ಅವಕಾಶವಿಲ್ಲ. ಒಂದು ಅಂಥವರಿದ್ದರೆ ಪಕ್ಷದಲ್ಲಿ ಜಾಗವಿಲ್ಲ ಎಂದು ಅವರು ಹೇಳಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರಗಳೇ ಇರುವುದು ಐತಿಹಾಸಿಕ ಎಂದು ಬಣ್ಣಿಸಿದ ಡಿಸಿಎಂ ಅಶ್ವಥ್ ನಾರಾಯಣ್, ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ, ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡುತ್ತಿವೆ. ಸರಕಾರಗಳ ಉತ್ತಮ ಕೆಲಸಗಳನ್ನು ಜನರಿಗೆ ಮುಟ್ಟಿಸಬೇಕು ಎಂದು ಕರೆ ನೀಡಿದರು.

Key words: Prime Minister- Modi’-birthday – celebration- Blood donation camp – BJP -youth activist.