ಕಲ್ಬುರ್ಗಿ,ಜನವರಿ,19,2023(www.justkannada.in): ಯಾದಗಿರಿ ಮತ್ತು ಕಲ್ಬುರ್ಗಿ ಜಿಲ್ಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರವಾಸ ಕೈಗೊಂಡು ಹಲವು ಯೋಜನೆಗಳಿಗೆ ಚಾಲನೆ ನೀಡಿದರು.![]()
ಕಲ್ಬುರ್ಗಿಯ ಮಳಖೇಡ ಗ್ರಾಮದಲ್ಲಿ ಆಯೋಜಿಸಿದ್ಧ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂಜಾರ ಸಮುದಾಯಕ್ಕೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಲಂಬಾಣಿ ತಾಂಡಾ ಜನರಿಗೆ ಹಕ್ಕುಪತ್ರ ವಿತರಣೆ ಮಾಡಿದರು.
ಈ ವೇಳೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಇಂದು ಲಂಬಾಣಿ ತಾಂಡದ 51 ಸಾವಿರಕ್ಕೂ ಹೆಚ್ಚು ಜನರಿಗೆ ಹಕ್ಕುಪತ್ರ ವಿತರಿಸಲಾಗುತ್ತಿದ್ದು ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮುಂದಿನ ತಿಂಗಳು ಉಳಿದವರಿಗೆ ವಿತರಣೆ ಮಾಡಲಾಗುವುದು ಎಂದರು.
Key words: Prime Minister -Modi -distributed -rights – Banjara community.







