Tuesday, August 11, 2026

BDA Apartments

Home Front Page ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಪ್ರಧಾನಿ ಮೋದಿ, ಹೆಚ್.ಡಿಡಿ ಸೇರಿ ಹಲವರಿಂದ ಸಂತಾಪ.

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಪ್ರಧಾನಿ ಮೋದಿ, ಹೆಚ್.ಡಿಡಿ ಸೇರಿ ಹಲವರಿಂದ ಸಂತಾಪ.

ಮಂಗಳೂರು,ಸೆಪ್ಟಂಬರ್,13,2021(www.justkannada.in)  ಮಾಜಿ ಕೇಂದ್ರ ಸಚಿವ , ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಟ್ವಿಟ್ ಮಾಡಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ,  ದೇವರು ಅವರ ಕುಟುಂಬಕ್ಕೆ ಧುಃಖ ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ.  ಇನ್ನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸಹ ಸಂತಾಪ ಸೂಚಿಸಿದ್ದು , ಫರ್ನಾಂಡಿಸ್ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ಆಸ್ಕರ್ ಫರ್ನಾಂಡಿಸ್ ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ. ಅವರ ಕುಟುಂಬಕ್ಕೆ ದುಃಖಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಹಾಗೆಯೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ ಸಂತಾಪ ಸೂಚಿಸಿದ್ದು, ಆಸ್ಕರ್ ಫರ್ನಾಂಡಿಸ್ ಕಾಂಗ್ರೆಸ್ ಪಕ್ಷವನ್ನ ಮಾತೃಸ್ವರೂಪದಂತೆ ಕಂಡವರು ಅವರು ಅಜಾತಶತ್ರುವಾಗಿದ್ದರು.   ರಾಜಕೀಯವನ್ನ ಮೀರಿ ಎಲ್ಲರಬನ್ನೂ ಆದರಿಸುತ್ತಿದ್ದವರು. ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ.

ಕರಾವಳಿ ಭಾಗಕ್ಕೆ ಆಸ್ಕರ್ ಫರ್ನಾಂಡಿಸ್ ಕೊಡುಗೆ ಅಪಾರ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹೆಚ್.ಕೆ ಪಾಟೀಲ್ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

Key words: Prime Minister- Modi, HD Devegowda- condole – death -Congress leader -Oscar Fernandes.