14ನೇ ಆವೃತ್ತಿಯ ಏರೋ ಇಂಡಿಯಾ ಶೋಗೆ  ಚಾಲನೆ ನೀಡಿದ ಪ್ರಧಾನಿ ಮೋದಿ.

ಬೆಂಗಳೂರು,ಫೆಬ್ರವರಿ,13,2023(www.justkannada.in): ಯಲಹಂಕದ ವಾಯುನೆಲೆಯಲ್ಲಿ ಆಯೋಜನೆಗೊಂಡಿರುವ  14ನೇ ಆವೃತ್ತಿಯ ಏರೋ ಇಂಡಿಯಾ ಶೋಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.

ಇಂದಿನಿಂದ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ ಶೋ ಅನ್ನು ಪ್ರಧಾನಿಗಳು ಉದ್ಘಾಟಿಸಿದರು. ಈ ವೇಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಐದು ದಿನಗಳ ಪ್ರದರ್ಶನದಲ್ಲಿ 809 ರಕ್ಷಣಾ ಕಂಪನಿಗಳು ಮತ್ತು 98 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Key words: Prime Minister -Modi -inaugurated -14th edition – Aero India Show.