ಮನ್ ಕಿ ಬಾತ್​’ನಲ್ಲಿ ಹುತಾತ್ಮ ವೀರ ಯೋಧರನ್ನು ಸ್ಮರಿಸಿದ ಪ್ರಧಾನಿ ಮೋದಿ

ಬೆಂಗಳೂರು, ನವೆಂಬರ್ 2021 (www.justkannada.in): ಮನ್ ಕಿ ಬಾತ್​ನ 83ನೇ ಆವೃತ್ತಿಯಲ್ಲಿ ಪ್ರಧಾನಿ ಮೋದಿ ಅವರು ಹುತಾತ್ಮ ವೀರ ಯೋಧರನ್ನು ಸ್ಮರಿಸಿ, ನಮನ ಸಲ್ಲಿಸಿದ್ದಾರೆ.

ನಾನು ದೇಶದ ಭದ್ರತಾ ಪಡೆಗಳನ್ನು ನೆನಪಿಸಿಕೊಳ್ಳುತ್ತೇನೆ, ನಮ್ಮ ವೀರರನ್ನು ನೆನಪಿಸಿಕೊಳ್ಳುತ್ತೇನೆ. ಅವರನ್ನು ಹೆತ್ತ ತಾಯಂದರಿಗೆ ಪ್ರಣಾಮಗಳನ್ನು ಸಲ್ಲಿಸುತ್ತೇನೆಂದು ನರೇಂದ್ರ ಮೋದಿ ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ದೇಶವು ನೌಕಾಪಡೆಯ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸುತ್ತದೆ. ಡಿಸೆಂಬರ್ 16 ರಂದು ದೇಶವು 1971 ರ ಯುದ್ಧದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದೆ. ಈ ಎಲ್ಲಾ ಸಂದರ್ಭಗಳಲ್ಲಿ, ನಾನು ದೇಶದ ಭದ್ರತಾ ಪಡೆಗಳನ್ನು ನೆನಪಿಸಿಕೊಳ್ಳುತ್ತೇನೆ ಎಂದು ಮೋದಿ ತಿಳಿಸಿದ್ದಾರೆ.

ಕೊರೋನಾ ಇನ್ನೂ ಹೋಗಿಲ್ಲ ಎಂಬುದನ್ನು ಎಂದಿಗೂ ಮರೆಯಬೇಡಿ. ಮುನ್ನೆಚ್ಚರಿಕೆ ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.