ಸಿದ್ಧೇಶ್ವರ ಶ್ರೀಗಳ ಜೊತೆಯಿದ್ಧ ಫೋಟೊಗಳನ್ನ ಹಂಚಿಕೊಂಡು ಕಂಬನಿ ಮಿಡಿದ ಪ್ರಧಾನಿ ಮೋದಿ.

ವಿಜಯಪುರ ,ಜನವರಿ,3,2023(www.justkannada.in): ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ಸಿದ್ದೇಶ್ವರ ಶ್ರೀಗಳ  ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಶ್ರೀಗಳ ಜೊತೆಯಿದ್ದ ಫೋಟೋ ಟ್ವಿಟರ್‌ ನಲ್ಲಿ ಹಾಕಿ ಕನ್ನಡದಲ್ಲೇ  ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿರುವ ಸಿಎಂ  ಬಸವರಾಜ ಬೊಮ್ಮಾಯಿ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆಯಲ್ಲಿ ನಾನು ಭಾಗಿಯಾಗುತ್ತೇನೆ. ಶ್ರೀಗಳು  ಒಂದು ಸಂಸ್ಕೃತಿಯನ್ನ ಬಿಟ್ಟು ಹೋಗಿದ್ದಾರೆ ಶ್ರೀಗಳು ಪ್ರೀತಿ ವಿಶ್ವಾಸವನ್ನ ಬಿಟ್ಟು ಹೋಗಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಮಾಡಿದೆ.  ಜನ ಶಾಂತಿ ಸಂಯಮದಿಂದ ಅಂತಿಮದರ್ಶನ ಪಡೆಯಬೇಕು ಎಂದಿದ್ದಾರೆ.

Key words: Prime Minister -Modi -shared -photos –with- Siddeshwar Shri- Condolences