ಪ್ರಧಾನಿ ಮೋದಿ ಅವರ ನಗುಮೊಗದ ಜಾಹೀರಾತು : ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿಕೆ ವಾಗ್ದಾಳಿ…

ಬೆಂಗಳೂರು,ಏಪ್ರಿಲ್,22,2021(www.justkannada.in): ಕೊರೋನಾ ಸಂಕಷ್ಟದ ನಡುವೆ ಪತ್ರಿಕೆಗಳಲ್ಲಿ ಪ್ರಧಾನಿ ಮೋದಿ ಅವರ ನಗುಮೊಗದ ಜಾಹೀರಾತನ್ನ ನೀಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದ್ದಾರೆ.jk

ಈ ಬಗ್ಗೆ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು ಕಿಡಿಕಾರಿದ್ದಾರೆ.

ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ ಎಂದು ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು…..

ಹಾಗೆಯೇ  ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು ಎಂದು ರಾಜ್ಯ ಸರ್ಕಾರದ ವಿರುದ್ದ ಹೆಚ್.ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಸರ್ಕಾರ ಕೋವಿಡ್‌ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ,  ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು.Prime Minister -Modi –smiling- Advertising-Former CM HD kumaraswamy- against state government

ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರ ಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ ಎಂದು ಹೆಚ್.ಡಿಕೆ ರಾಜ್ಯಸರ್ಕಾರದ ಜಾಹೀರಾತಿನ ಬಗ್ಗೆ ಟಾಂಗ್ ನೀಡಿದರು.

Key words: Prime Minister -Modi –smiling- Advertising-Former CM HD kumaraswamy- against state government