Friday, September 11, 2026

BDA Apartments

Home Front Page ಕನ್ನಡದಲ್ಲೇ ಟ್ವೀಟ್ ಮಾಡಿ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ.

ಕನ್ನಡದಲ್ಲೇ ಟ್ವೀಟ್ ಮಾಡಿ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ.

ಬೆಂಗಳೂರು,ನವೆಂಬರ್,1,2023(www.justkannada.in): ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮವಾಗಿದ್ದು, ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣವಾಗಿ ಇಂದಿಗೆ 50 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ.

ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

Key words: Prime Minister- Modi -tweeted – Kannada – wished -Kannada Rajyotsava.