ದೇಶದ ಜನರನ್ನುದ್ದೇಶಿಸಿ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭಾಷಣ.

ಮೈಸೂರು,ಜೂನ್,7,2021(www.justkannada.in):  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ದೇಶದ ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.jk

ದೇಶದಲ್ಲಿ ಇತ್ತೀಚೆಗೆ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. ಈ ಮಧ್ಯೆ ಕೊರೊನಾ ತಡೆಗಾಗಿ ದೇಶದ ಹಲವು ರಾಜ್ಯಗಳು ಲಾಕ್ ಡೌನ್ ಘೋಷಣೆ ಮಾಡಿವೆ. ಈ ನಡುವೆ ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ  ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಪ್ರಧಾನಿಯವರ ಭಾಷಣ ತೀವ್ರ ಕುತೂಹಲ ಕೆರಳಿಸಿದ್ದು, ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ.

 ಭಾಷಣದಲ್ಲಿ, ದೇಶದ ಪ್ರಸ್ತುತ ಕೋವಿಡ್ ಸ್ಥಿತಿಗತಿ ಹಾಗೂ ನಿಯಂತ್ರಣ ಕ್ರಮಗಳ ಕುರಿತಂತೆ, ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಅನುಸರಿಸಬೇಕಾದಂತ ನಿಯಮಗಳ ಕುರಿತಂತೆ ಮಾತನಾಡಲಿದ್ದಾರೆ ಎನ್ನಲಾಗಿದೆ. ಇನ್ನು ಇದೇ ವೇಳೆ ಕೊರೊನಾ ಕಡಿಮೆಯಾಗಿರುವ ರಾಜ್ಯಗಳಿಗೆ ಅನ್ ಲಾಕ್ ಮಾಡುವಂತೆ ಸೂಚನೆ ನೀಡುವ ಸಾಧ್ಯತೆಯೂ ಇದೆ.

Key words: Prime Minister- Narendra Modi -addresses -people – country- at 5 pm