ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಮಂಡ್ಯದತ್ತ ಪ್ರಯಾಣ

ಮೈಸೂರು ಮಾರ್ಚ್ 12, 2023 (www.justkannada.in): ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ನಂತರ ಮಂಡ್ಯದತ್ತ ಪ್ರಯಾಣ ಬೆಳೆಸಿದ್ದಾರೆ.

ಪ್ರಧಾನ ಮಂತ್ರಿ ಗಳು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಇಲ್ಲಿಂದ ಹೆಲಿಕಾಪ್ಟರ್ ಮೂಲಕ ಮಂಡ್ಯದತ್ತ ಪ್ರಯಾಣ ಬೆಳೆಸಿದ್ದಾರೆ.

ಮಂಡ್ಯ ಜಿಲ್ಲೆಯ ಗೆಜ್ಜಲಗೆರೆಯಲ್ಲಿ  ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ರೋಡ್ ಶೋನಲ್ಲಿ  ಕಲಾತಂಡಗಳು ಭಾಗಿಯಾಗಲಿವೆ.

ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಹಾಗೂ ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅವರು ಈ  ಕಲಾತಂಡಗಳೊಂದಿಗೆ ಆತ್ಮೀಯವಾಗಿ ಮಾತನಾಡಿಸಿದರು.

11.40 ಕ್ಕೆ  ಒಟ್ಟು 8479 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 118 ಕಿ.ಮೀ ಉದ್ದದ  ಮೈಸೂರು-ಬೆಂಗಳೂರು ದಶಪಥ ರಸ್ತೆಯನ್ನು ಹನಕೆರೆಯ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ.