ಏಕಕಾಲಕ್ಕೆ 5 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ನರೇಂದ್ರ ಮೋದಿ.

ಮಧ್ಯಪ್ರದೇಶ,ಜೂನ್,27,2023(www.justkannada.in):  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಂದೇ ದಿನ ದೇಶದ ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು.

ಭೂಪಾಲ್ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಏಕಕಾಲದಲ್ಲಿ ಐದು ವಂದೇ ಭಾರತ್ ರೈಲುಗಳೀಗೆ  ಪ್ರಧಾನಿ ನರೇಂದ್ರ ಮೋದಿ ಅವರು ವರ್ಚ್ಯುವಲ್ ಮೂಲಕ ಹಸಿರು ನಿಶಾನೆ ತೋರಿಸಿದರು.

ರಾಣಿ ಕಮಲಾಪತಿ-ಜಬಲ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, ಹತಿಯಾ-ಪಾಟ್ನಾ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು.

ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಉಪಸ್ಥಿತರಿದ್ದರು. ಧಾರವಾಡದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಯಾಣ ಆರಂಭಿಸಿದ್ದು ಕೇಂದ್ರ ಸಚಿವ  ಪ್ರಹ್ಲಾದ್ ಜೋಶಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.

Key words: Prime Minister-Narendra Modi -green signal – 5 Vande Bharat- trains