ಮನ್ ಕಿ ಬಾತ್’ನಲ್ಲಿ ಹೊಸ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು, ಸೆಪ್ಟೆಂಬರ್ 25, 2022 (www.justkannada.in): ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ದ 93 ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು.

ಚಂಡೀಗಢ ವಿಮಾನ ನಿಲ್ದಾಣಕ್ಕೆ ಈಗ ಶಹೀದ್ ಭಗತ್ ಸಿಂಗ್ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ ಎಂದು ಇದೇ ವೇಳೆ ಘೋಷಿಸಿದರು.

ಈ ದಿನದಂದು, ನಾವು ಭಾರತ ಮಾತೆಯ ಧೈರ್ಯಶಾಲಿ ಪುತ್ರ ಭಗತ್ ಸಿಂಗ್ ಅವರ ಜಯಂತಿಯನ್ನು ಆಚರಿಸಲಿದ್ದೇವೆ ಎಂದು ಪ್ರಧಾನಿ ಇದೇ ವೇಳೆ ತಿಳಿಸಿದರು.

ದೀನ್ ದಯಾಳ್ ಉಪಾಧ್ಯಾಯ ಸ್ಮರಣೆ: ದೀನ್ ದಯಾಳ್ ಉಪಾಧ್ಯಾಯ ಅವರು ದೇಶದ ಪ್ರಗತಿಯ ಪ್ರಮಾಣವು ಕೊನೆಯ ಹಂತದ ವ್ಯಕ್ತಿ ಎಂದು ಹೇಳುತ್ತಿದ್ದರು. ಸ್ವಾತಂತ್ರ್ಯದ ಅಮೃತ ಕಾಲದಲ್ಲಿ ದೀನದಯಾಳ್ ಜೀ ಅವರನ್ನು ನಾವು ಹೆಚ್ಚು ಹೆಚ್ಚು ತಿಳಿದುಕೊಂಡಷ್ಟೂ, ಅವರಿಂದ ನಾವು ಹೆಚ್ಚು ಹೆಚ್ಚು ಕಲಿಯುತ್ತೇವೆ ಎಂದರು.