ರೈಲು ದುರಂತಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ – ಪ್ರಧಾನಿ ನರೇಂದ್ರ ಮೋದಿ.

ಒಡಿಶಾ,ಜೂನ್,3,2023(www.justkannada.in):  ರೈಲು ಅಪಘಾತ ದುರಂತವನ್ನ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದುರಂತಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇಂದು ರೈಲು ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಕಟಕ್ ನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

ರೈಲು ದುರಂತ ನೋವು ತಂದಿದೆ. ಕೇಂದ್ರ ಸರ್ಕಾರ ನೊಂದವರ ಜೊತೆ ಇದೆ. ರೈಲು ದುರಂತವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದುರಂತಕ್ಕೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸುತ್ತೇವೆ. ತನಿಖೆಗೆ ಸೂಚನೆ ನೀಡಿದ್ದೇವೆ ತಪ್ಪಿತಸ್ಥರಿಗೆ ಶಿಕ್ಷೆಯಗಾಗಲಿದೆ. ದುರಂತ ಪಾಠ ಕಲಿಸಿದೆ, ಮುಂದೆ ಹೀಗೆ ಆಗದಂತೆ ಎಚ್ಚರಿಕೆ ವಹಿಸ್ತೇವೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆಯನ್ನು ಒದಗಿಸುತ್ತೇವೆ. ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Key words: Prime Minister -Narendra Modi-odisha-  train accident-hospital