Sunday, August 9, 2026

BDA Apartments

Home Front Page ಪದೇ ಪದೇ ಪಾಕ್ ಜಪ ಮಾಡುವ ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ…?- ನರೇಂದ್ರ...

ಪದೇ ಪದೇ ಪಾಕ್ ಜಪ ಮಾಡುವ ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ…?- ನರೇಂದ್ರ ಮೋದಿ ವಿರುದ್ದ ಹೆಚ್.ಡಿ ಕುಮಾರಸ್ವಾಮಿ ಕಿಡಿ…

ಬೆಂಗಳೂರು,ಜ,3,2020(www.justkannada.in):  ನಿನ್ನೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಭಾಷಣ ಮಾಡುತ್ತ ಸಿಎಎ ವಿಚಾರ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ,  ಸಿಎಎ ವಿಷಯದಲ್ಲಿ ಪದೇ ಪದೇ ಪಾಕಿಸ್ತಾನದ ಜಪ ಮಾಡುವ ಮೋದಿ ಅವರೇ ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ? ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ವೋಟು ಕೊಟ್ಟರೋ?  ಭಾರತದ ಪ್ರಜೆಗಳು ವೋಟು ಕೊಟ್ಟರೋ? ಭಾರತೀಯ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ, ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ? ಎಂದು ಪ್ರಶ್ನಿಸಿದ್ದಾರೆ.

ಹಾಗೆಯೇ ಭಾರತೀಯರ ವೋಟು ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ನಿಮಗೆ ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ ಪಾಕಿಸ್ತಾನದವರಿಗೆ ಪೌರತ್ವ ನೀಡುವುದು ಆದ್ಯತೆಯೋ? ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡಲಾಗದಿದ್ದರೂ ಪಾಕಿಸ್ತಾನದ ಮೇಲೆ ನಿಮಗೆ ಪ್ರೀತಿ ಉಕ್ಕುತ್ತಿರುವುದೇಕೆ? ಅಲ್ಲಿನವರ ಮೇಲೆ ಯಾಕಿಷ್ಟು ಮಮಕಾರ?  ಎಂದು ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದರು.

ಈ ನಡುವೆ 25 ಸಂಸದರನ್ನು ಕೊಟ್ಟ ಕರ್ನಾಟಕದಲ್ಲಿ ಉಂಟಾದ ನೆರೆಯಿಂದ 35 ಸಾವಿರ ಕೋಟಿ ನಷ್ಟವಾದರೂ ಕೊಟ್ಟಿದ್ದು ಚಿಕ್ಕಾಸು, ನರೇಗಾ ಬಾಕಿ ಕೊಟ್ಟಿಲ್ಲ, ತೆರಿಗೆಯಲ್ಲಿ ರಾಜ್ಯದ ಪಾಲು ಕೊಟ್ಟಿಲ್ಲ, ಬರ ಪರಿಹಾರವಿಲ್ಲ. ಇವುಗಳ ಬಗ್ಗೆ ಮಾತನಾಡಲಾಗದ ನೀವು ಮಾತಾಡುವುದು ಪಾಕಿಸ್ತಾನದ ಬಗ್ಗೆ. ಮೊದಲು ಪಾಕಿಸ್ತಾನದ ಜಪ ನಿಲ್ಲಿಸಿ ಕರ್ನಾಟಕಕ್ಕೆ ಬರಬೇಕಾದ ಹಣ ಕೊಡಿ ಎಂದು ಹೆಚ್.ಡಿಕೆ ಟ್ವಿಟ್ಟರ್ ನಲ್ಲಿ ಆಗ್ರಹಿಸಿದ್ದಾರೆ.

ಕೇಂದ್ರ ಕಟ್ಟಿಸಿಕೊಂಡ ತೆರಿಗೆಯ ಕರ್ನಾಟಕದ ಪಾಲನ್ನು ಹಾಗೂ ನೆರೆ ಪರಿಹಾರದ ಹಣವನ್ನು ಯಡಿಯೂರಪ್ಪ ಪಾಕಿಸ್ತಾನವನ್ನು ಕೇಳಬೇಕೋ ಅಥವಾ ಭಾರತೀಯ ಮತದಾರರಿಂದ ಆಯ್ಕೆಯಾದ ನಿಮ್ಮನ್ನು ಕೇಳಬೇಕೋ? ಎಂದು ಪ್ರಧಾನಿ ಮೋದಿಗೆ ಹೆಚ್.ಡಿಕೆ ಪ್ರಶ್ನೆ ಹಾಕಿದರು.

ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ, ವಿದ್ಯಾರ್ಥಿಗಳ ಎದುರು ಭಾಷಣ ಮಾಡಿದ ನೀವು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಏನಾದರೂ ಸಲಹೆ ಕೊಟ್ಟಿರಾ? ಇಲ್ಲ… ಅದು ಬಿಟ್ಟು ಪಾಕಿಸ್ತಾನದ ಜಪ ಮಾಡುತ್ತೀರಿ. ಇದು ನಿಮ್ಮ ರಾಜಕೀಯ, ಅಧಿಕಾರದ ಆಸೆಯನ್ನು ಸಾಭೀತು ಮಾಡುತ್ತದೆ ಎಂದು ಲೇವಡಿ ಮಾಡಿದರು.

key words: Prime Minister –narendra modi-Pakistan –former cm- HD Kumaraswamy